ಚಿತ್ರದುರ್ಗ : ಶ್ರೀಗಂಧ ಕಳ್ಳತನವಾಗುತ್ತೆಂದು ಅಡುಕೆ ತೋಟದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರನ್ನು ಮಧ್ಯಪ್ರದೇಶ ಮೂಲದ ಮೋಹಿತ್(24), ಕತರ್ವ (38) ಎಂದು ಗುರುತಿಸಲಾಗಿದೆ.
ಗ್ರಾಮದ ಜಯರಾಂ ಎಂಬುವರ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಶ್ರೀಗಂಧ ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಜಯರಾಂ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧದ ಮರಗಳಿದ್ದವು. ಕಳ್ಳತನಕ್ಕೆ ಆಗಮಿಸಿ ಈ ರೀತಿ ಸಾವಿಗೀಡಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.