ಕರ್ನಾಟಕ

ಉದಯಗಿರಿ ಕಲ್ಲು ತೂರಾಟ ಕೇಸ್‌ : ಗಲಭೆಗೆ ಪ್ರಚೋಧನೆ ನೀಡಿದ ಮೌಲ್ವಿ ಬಂಧನ

ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋಧನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ  ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನ ಹಂಚಿಕೊಂಡಿದ್ದು, ಗಲಭೆಗೆ ಕಾರಣವಾಗಿತ್ತು. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಬಳಿಕ ಉದ್ರಿಕ್ತ ಗುಂಪು ಏಕಾಏಕಿಯಾಗಿ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು. ಪ್ರಕರಣ ಸಂಬಂಧ ಗಲಭೆಗೆ ಪ್ರಚೋಧನೆ ನೀಡಿದ ಆರೋಪದ ಮೇಲೆ ಮೌಲ್ವಿ ಮುಫ್ತಿ ಮುಸ್ತಾಕ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.