ಮೈಸೂರು : ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 13 ಜನ ಯುವಕರು ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, 13 ಜನರಿಗೆ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ಪರೀಕ್ಷೆ ನಂತರ 13 ಜನರನ್ನ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ.
13 ಮಂದಿ ಆರೋಪಿಗಳನ್ನ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜೊತೆಗೆ ಓರ್ವ ಬಾಲಕನನ್ನ ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಇನ್ನೂ ಪ್ರಕರಣ ಸಂಬಂಧ ಉಳಿದ ಜನರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇನ್ನಷ್ಟು ಜನರನ್ನ ಬಂಧಿಸುವ ಸಾಧ್ಯತೆ ಇದೆ.