ಕರ್ನಾಟಕ

ಕಾಂಗ್ರೆಸ್‌ ಆಡಳಿತದಲ್ಲಿ ರಾಕ್ಷಸೀ ಕೃತ್ಯ ಮೆರೆಯುವರು ಸೃಷ್ಟಿ - ಹೆಚ್‌ಡಿಕೆ

ಬೆಂಗಳೂರಿನ ಚಾಮರಾಜಪೇಟೆ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಬೆಂಗಳೂರಿನ ಚಾಮರಾಜಪೇಟೆ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲೋದನ್ನು ನೋಡಿದ್ದೀವಿ.. ಕಾಮಧೇನು, ಮಹಾಲಕ್ಷ್ಮೀ ಹಾಗೆ.. ಅಂಥಾ ಕಾಮಧೇನು ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರೋ ಆ ಕೆಟ್ಟ ಮನಸ್ಥಿತಿಗೆ ಏನನ್ನಬೇಕು ಎಂದು ಕಿಡಿಕಾರಿದ್ದಾರೆ.. ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿಣ ಕ್ರಮ ತಗೋಬೇಕು, ಅವರ ಬೆಣ್ಣೆ ಮಾತು ನಡೆಯಲ್ಲ.. ಡಿನ್ನರ್ ಮೀಟಿಂಗ್ ನಿಲ್ಲಿಸಿ, ಆಡಳಿತ ಸರಿ ಮಾಡೋದನ್ನು ನೋಡಿ.. ಇಂಥ ವಿಚಾರಗಳಲ್ಲಿ ಕ್ರಮ ತಗೊಳ್ಳಿ.. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಕ್ಷಸೀ ಕೃತ್ಯ ಮೆರೆಯುವ ಇಂಥ ಜನರನ್ನ ಸೃಷ್ಟಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ..