ಇಸ್ರೇಲ್-ಹಮಾಸ್ ನಡುವಿನ ಸಂಘರ್ಷದ ವಿರಾಮದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ಯುದ್ಧ ವಿರಾಮದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡೊನಾಲ್ಡ್ ಟ್ರಂಪ್, ಇದೀಗ ಇಸ್ರೇಲ್‌ನ ಗಾಜಾ ಪಟ್ಟಿಯನ್ನು ಸ್ವಾಧೀನ ಪಡೆದುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಮೆರಿಕಾಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭೇಟಿ ನೀಡಿ ಟ್ರಂಪ್ ಜೊತೆ ಮಾತುಕತೆ ನಡೆಸಿದ ಬಳಿಕ, ಟ್ರಂಪ್ ಈ ಕುರಿತ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಈ ಬಗ್ಗೆ ವಿಶ್ವದಾದ್ಯಂತ ಚರ್ಚೆ ಶುರುವಾಗಿದೆ. ಆದರೆ ಪುನಾರಭಿವೃದ್ಧಿ ಯೋಜನೆಯಡಿ ಗಾಜಾ ಪಟ್ಟಿಯನ್ನು ಅಮೆರಿಕ ಸ್ವಾಧೀನ ಪಡೆದುಕೊಳ್ಳುತ್ತೆ ಎಂದು ಟ್ರಂಪ್ ಹೇಳಿದ್ದಾರೆ.