ಪ್ರಯಾಗರಾಜ್ನ ಮಹಾ ಕುಂಭಮೇಳದಲ್ಲಿ ಪ್ರತಿನಿತ್ಯ ಕೋಟ್ಯಂತರ ಭಕ್ತರು ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ.. ಇಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.. ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆಯೇ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಮತ್ತು ಕ್ಯಾಬಿನೆಟ್ ಸಚಿವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.. ಜನವರಿ 13 ರಿಂದ ಸುಮಾರು 9 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ.. ಇನ್ನು ಪ್ರಯಾಗ್ರಾಜ್ನ ಧಾರ್ಮಿಕ ಹಬ್ಬದಲ್ಲಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಗೃಹ ಸಚಿವ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುವ ಸಾಧ್ಯತೆಯಿದೆ.. ಮತ್ತೊಂದೆಡೆ ಪ್ರಯಾಗ್ರಾಜ್ನ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ನಲ್ಲಿ ಸಿಎಂ ಯೋಗಿ ಸರ್ಕಾರದ ಕ್ಯಾಬಿನೆಟ್ ಸಭೆ ಕೂಡ ನಡೆದಿದೆ..