ವಿವಿಧ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ಹೂಡಿದ್ದಾರೆ. ಮಂಡ್ಯದ ತಾಲ್ಲೂಕು ಕಚೇರಿ ಬಳಿ ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ. ಕಪ್ಪು ಪಟ್ಟಿ ಕಟ್ಟಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಹೂಡಿದ್ದು, VAಗಳಿಗೆ ಕಚೇರಿ ವ್ಯವಸ್ಥೆ, ಕಂಪ್ಯೂಟರ್ ಸೇವೆ, ಇಂಟರ್ನೆಟ್ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯಗಳ ಒದಗಿಸುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಮುಷ್ಕರ ಮುಂದುವರಿಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ತಕ್ಷಣವೇ ಮೂಲಭೂತ ಸೌಕರ್ಯಗಳನ್ನ ಒದಗಿಸಲು ಒತ್ತಾಯಿಸಿದ್ದಾರೆ.