ಬೆಳಗಾವಿ ಅಧಿವೇಶನ ವೇಳೆಯೇ ಬಿಮ್ಸ್‌ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದ್ದಾರೆ.. ಕಳೆದ 1 ವರ್ಷದಲ್ಲಿ 29 ಬಾಣಂತಿಯರು ಮತ್ತು 322 ಶಿಶುಗಳ ಸಾವಿನ ಬಗ್ಗೆ ಮಾಹಿತಿ ಪಡೆದಿದ್ದಾರೆ.. ಬಿಮ್ಸ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಾರ್ಡಿಗೆ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಿ ರೋಗಿಗಳ ಸಂಕಷ್ಟ ಆಲಿಸಿದೆ.. ಬಾಣಂತಿಯರ ಸಾವಿನ ಕುರಿತು ಬಿ.ವೈ. ವಿಜಯೇಂದ್ರ ವೈದ್ಯಾಧಿಕಾರಿಗಳಿಂದಲೂ ಮಾಹಿತಿ ಪಡೆದಿದ್ದಾರೆ.. ಇದೇ ವೇಳೆ ಮಾತನಾಡಿರುವ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಕಾಂಗ್ರೆಸ್ ನಾಯಕರಿಗೆ ಬಡವರ ಜೀವದ ಬೆಲೆ ಗೊತ್ತಿಲ್ಲ, ಸಿದ್ದರಾಮಯ್ಯ ಮತ್ತು ಸಚಿವರು ಹಗರಣಗಳಲ್ಲೇ ಮುಳುಗಿದ್ದಾರೆ ಅಂತಾ ಆರೋಪಿಸಿದ್ದಾರೆ..
ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ.. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.. ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ.. ಈ ಬೇಜವಾಬ್ದಾರಿತನ ಏನಿದೆಯೋ ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಗಮನ ಸೆಳೆಯುತ್ತೇವೆ ಎಂದು ತಿಳಿಸಿದರು..