ಶಿವಮೊಗ್ಗ : ಬಿಜೆಪಿ ರೆಬೆಲ್ ನಾಯಕರ ದೆಹಲಿ ಪ್ರವಾಸಕ್ಕೆ ವಿಜಯೇಂದ್ರ ಟಕ್ಕರ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ವಿಜಯೇಂದ್ರ, ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದಿದ್ದಾರೆ.
ಇನ್ನೂ ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ತಳಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಾಗಲೇ ಏನೇನು ಡ್ಯಾಮೇಜ್ ಆಗಬೇಕು ಎಲ್ಲವೂ ಆಗಿ ಹೋಗಿದೆ. ಒಂದು ವಾರದಲ್ಲಿ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಉತ್ತರ ಸಿಗುತ್ತದೆ. ಅದಾದನಂತರ ಎಲ್ಲವೂ ಸರಿಯಾಗಲಿದೆ ಎಂದರು.