ಹಾಸನ : ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆಯೊಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ನಾಡಕಚೇರಿಯಲ್ಲಿ ನಡೆದಿದೆ. ಡಿ.ಆರ್. ಮೋಹನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ವಿಎ. ಡಿ.ಆರ್.ಮೋಹನ್ ಕುಮಾರ್ ಜಿಲ್ಲೆಯ ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಹೌದು, ಮೋಹನ್ ಕುಮಾರ್, ನಾಗೇಶ್ ಎನ್ನುವರರ ಬಳಿ ಜಮೀನು ಮಂಜೂರಾತಿ ಹಾಗೂ ಸ್ಥಳ ಪರಿಶೀಲನೆಗಾಗಿ 25,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಲಂಚದ ಹಣದ ಸಮೇತ ವಿಎ ಡಿ.ಆರ್. ಮೋಹನ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.