ಟೀಂ ಇಂಡಿಯಾ ಕ್ರಿಕೆಟ್ ಮಾಜಿ ಆಟಗಾರ ವಿನೋದ್ ಕಾಂಬ್ಲಿ ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಆಸ್ಪತ್ರೆಯ ಸಿಬ್ಬಂದಿ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗ್ತಿದೆ.. ವಿನೋದ್ ಕಾಂಬ್ಳಿ ಅವರು ಮೂತ್ರನಾಳದ ಸೋಂಕು ಮತ್ತು ಸ್ನಾಯು ಸೆಳೆತದಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಆದರೆ ಇದೀಗ ವಿನೋದ್ ಕಾಂಬ್ಳಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಜೊತೆ ವಾರ್ಡ್‌ನಲ್ಲಿಯೇ ಹಾಡಿಗೆ ಕುಣಿದಿದ್ದಾರೆ.
ಅನಾರೋಗ್ಯ ಹಿನ್ನೆಲೆ ವಿನೋದ್ ಕಾಂಬ್ಳಿ ಮುಂಬೈನ ಥಾಣೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಚೇತರಿಸಿಕೊಳ್ತಿದ್ದಂತೆ 'ಚಕ್ ದೇ' ಸಿನಿಮಾದ ಟೈಟಲ್ ಸಾಂಗ್ ಹಾಡುತ್ತಾ ಆಸ್ಪತ್ರೆಯ ಸಿಬ್ಬಂದಿ ಜೊತೆ ಡ್ಯಾನ್ಸ್ ಮಾಡಿದ್ದಾರೆ.