ಸಿನಿಮಾ

ಈ ವಾರ ತೆರೆಗೆ"ಅಣ್ಣಯ್ಯ" ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ "ಅಪಾಯವಿದೆ ಎಚ್ಚರಿಕೆ"

ತುಂಬಾ ದಿನಗಳ ಬಳಿಕ ಕನ್ನಡದಲ್ಲಿ ಈ ರೀತಿಯ ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಸಿನಿಮಾವನ್ನು ಬರೆದು, ನಿರ್ದೇಶಸಿರುವ ಅಭಿಜಿತ್ ತೀರ್ಥಹಳ್ಳಿ

ಈ ವಾರ ತೆರೆಗೆ"ಅಣ್ಣಯ್ಯ" ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ  "ಅಪಾಯವಿದೆ ಎಚ್ಚರಿಕೆ" ಆರಂಭದಿಂದಲೂ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನರ ಮನಸ್ಸನ್ನು ತಲುಪಿರುವ ''ಅಪಾಯವಿದೆ ಎಚ್ಚರಿಕೆ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 


ತುಂಬಾ ದಿನಗಳ ಬಳಿಕ ಕನ್ನಡದಲ್ಲಿ ಈ ರೀತಿಯ ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಸಿನಿಮಾವನ್ನು ಬರೆದು, ನಿರ್ದೇಶಸಿರುವ ಅಭಿಜಿತ್ ತೀರ್ಥಹಳ್ಳಿ,‌ ಚಿತ್ರದ ಬಹುತೇಕ ಭಾಗವನ್ನು ಕತ್ತಲೆಯ ಕಾಡಲ್ಲಿ ಚಿತ್ರೀಕರಿಸಿದ್ದು, ನೋಡುಗನ ಗಮನ ಸೆಳೆಯುವಂತೆ ಮಾಡಿದ್ದಾರೆ. 


ವಿ. ಜಿ ಮಂಜುನಾಥ್ ಮತ್ತು ಪೂರ್ಣಿಮ ಎಂ ಗೌಡ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಸುನಾದ್ ಗೌತಮ್. 


"ಅಣ್ಣಯ್ಯ" ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ''ಅಮೃತಧಾರೆ'' ಖ್ಯಾತಿಯ ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.