ಕರ್ನಾಟಕ

ವಾಟರ್‌ ಮ್ಯಾನ್ ನ್ನ ಬರ್ಬರವಾಗಿ ಹತ್ಯೆ ಮಾಡಿದ ರೌಡಿಶೀಟರ್.!

ಗ್ರಾಮದ ಆಟೋ ನಿಲ್ದಾಣದ ಬಳಿ ಗಣೇಶ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಗ್ರಾಮದ ರೌಡಿಶೀಟರ್ ಮಧು ಗಣೇಶನ ಜತೆ ಜಗಳವಾಡಿದ್ದನು. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಗಣೇಶನಿಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆ ಬಳಿಕ ಆರೋಪಿ ಎಸ್ಕೇಪ್ ಆಗಿದ್ದಾನೆ.

ಚಾಕುವಿನಿಂದ ಇರಿದು ವಾಟರ್‌ಮ್ಯಾನ್‌ ನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ (27) ಕೊಲೆಯಾದ ವಾಟರ್‌ಮ್ಯಾನ್ ಯಾಗಿದ್ದು, ಗಣೇಶ ಚೀಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ಮ್ಯಾನ್ ಆಗಿದ್ದನು.

murder | Zee News Kannada

ಹೌದು, ಗ್ರಾಮದ ಆಟೋ ನಿಲ್ದಾಣದ ಬಳಿ ಗಣೇಶ ನಿಂತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಗ್ರಾಮದ ರೌಡಿಶೀಟರ್ ಮಧು ಗಣೇಶನ ಜತೆ ಜಗಳವಾಡಿದ್ದನು. ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಗಣೇಶನಿಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆ ಬಳಿಕ ಆರೋಪಿ ಎಸ್ಕೇಪ್ ಆಗಿದ್ದಾನೆ.

ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.