ಕರ್ನಾಟಕ

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು?ಸಚಿವ ಜಮೀರ್ ಅಹ್ಮದ್ ಸಮರ್ಥನೆ..

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ : ಪ್ಯಾಲೆಸ್ತೀನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿ ಪುಂಡಾಟ ಮೆರೆದಿದ್ದಾರೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಪ್ಯಾಲೆಸ್ತೀನ್ ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಎಂದು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

Zameer Ahmed Khan

ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ಯಾಲೆಸ್ತೀನ್ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ. ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರದಲ್ಲಿ ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಯಾರೇ ಬೆಂಕಿ ಹಚ್ಚುವ ಕೆಲಸ ಮಾಡಿದರೂ ಕ್ರಮಕೈಗೊಳ್ಳಬೇಕು. ರಾಜಕಾರಣಿಗಳು ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ. ಸಿಎಂ ರಾಜೀನಾಮೆ ನೀಡುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ವಿಜಯೇಂದ್ರರಂತಹ ನೂರು ಜನ ಬಂದರೂ ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಅವರಂಥ ಇನ್ನೂರು ಜನ ಬಂದರೂ ಏನೂ ಆಗಲ್ಲ. ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ ಎಂದರು.