ಕರ್ನಾಟಕ

ನನಗೆ ಏನೇ ತೊಂದರೆಯಾದ್ರೂ ಸರ್ಕಾರ, ಪೊಲೀಸ್‌ ಇಲಾಖೆ ಕಾರಣ..!

ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಿಟಿ ರವಿಯವರನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಸಿಟಿ ರವಿ ಅರೆಸ್ಟ್‌ ಆಗುತ್ತಿದ್ದಂತೆ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಟಿ ರವಿಯವರು, ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು. ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. 

ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.