ಬಾಗಲಕೋಟೆ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಜಮಖಂಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಜಮಖಂಡಿಯ ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿದ್ದು, ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆ ಆಗಲಿದೆ ಎಂದು ಹೇಳಿಕೆ ನೀಡಿದ್ಧಾರೆ.
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿಬರುವ ಸುದ್ದಿ ಬಂದಿದೆ, ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಕೈ ಕಾರ್ಯಕರ್ತರ ಎದುರು ಹೇಳಿದ್ದಾರೆ. ಆ ಅಶ್ಲೀಲ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೇ. ಬಿಜೆಪಿ ಮಾಜಿ ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನ್ಯಾಮಗೌಡ ಹೇಳಿದ್ದಾರೆ.