ಕರ್ನಾಟಕ

ಕಾಂಗ್ರೆಸ್​ ಸೇರ್ತಾರಾ ಸಿ.ಪಿ ಯೋಗೇಶ್ವರ್? ಡಿ.ಕೆ ಶಿವಕುಮಾರ್‌ ಹೇಳಿದ್ದೇನು?

ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದರು. ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ಮಾಧ್ಯಮದವರನ್ನು ನಿಲ್ಲಿಸಿದರೂ ನನಗೆ ಓಟು ​ಎಂದು ಹೇಳಿದರು.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಬಾರಿ ಮಹತ್ವ ಪಡೆದುಕೊಂಡಿದೆ. ಈ ನಡುವೆ  ಟಿಕೆಟ್ಆಕಾಂಕ್ಷಿ ಸಿಪಿ ಯೋಗೇಶ್ವರ್ಅವರು ಕಾಂಗ್ರೆಸ್ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಎಲ್ಲ ವದಂತಿಗಳಿಗೆ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್  ಸ್ಪಷ್ಟನೆ ನೀಡಿದ್ದಾರೆ

  ಬಗ್ಗೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ ಎಂದಿದ್ದಾರೆ.

ಅಷ್ಟೇಅಲ್ಲದೆ, ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದರು.

ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದರು. ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ಮಾಧ್ಯಮದವರನ್ನು ನಿಲ್ಲಿಸಿದರೂ ನನಗೆ ಓಟು  ಎಂದು ಹೇಳಿದರು.

ಸಿ.ಪಿ.ಯೋಗೇಶ್ವರ್ ಅವರು ಬಂದರೆ ಪಕ್ಷಕ್ಕೆ ಆಹ್ವಾನ ಮಾಡುವಿರಾ ಎಂದು ಕೇಳಿದಾಗ, ಮಾಧ್ಯಮದವರು ಏಕೆ ಇದರ ಬಗ್ಗೆ ಮಾತನಾಡುತ್ತೀರಾ? ನಮ್ಮ ಬಳಿಗೆ ಯಾರೂ ಬಂದಿಲ್ಲ, ಚರ್ಚೆಯನ್ನೂ ಮಾಡಿಲ್ಲ. ಅವರು ಮೈತ್ರಿ ಮಾಡಿಕೊಂಡಿರುವಾಗ ಏಕೆ ಅವರ ಬಗ್ಗೆ ಮಾತನಾಡಬೇಕು. ಮೊದಲು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತೇನೆ ಎಂದರು.