ಕರ್ನಾಟಕ

ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್ ಗೆ ಲಾರಿಗೆ ಡಿಕ್ಕಿ – ಮಹಿಳೆ ಸಾ*ವು.!

ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ಈ ದುರ್ಘಟನೆಸಂಭವಿಸಿದ್ದು, ಘಟನೆಯಲ್ಲಿ ಅಂಬುಲೆನ್ಸ್‌ನಲ್ಲಿದ್ದ ಸರೋಜಮ್ಮ (52) ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ : ಅಂಬುಲೆನ್ಸ್‌ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹಾವೇರಿಯ ಮೂಲದ ಶಿವಬಸವ (50) ಎಂಬ ವ್ಯಕ್ತಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ  ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಇದೇ ವೇಳೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಆ್ಯಂಬುಲೆನ್ಸ್ ಒಳಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ಈ ದುರ್ಘಟನೆಸಂಭವಿಸಿದ್ದು,  ಘಟನೆಯಲ್ಲಿ ಅಂಬುಲೆನ್ಸ್‌ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ. ಅಲ್ಲದೇ ಅಂಬುಲೆನ್ಸ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.