ಕರ್ನಾಟಕ
ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ.!!
ಹುಬ್ಬಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಹುಬ್ಬಳ್ಳಿಯಲ್ಲಿಂದು ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ. ಟಾಟಾ ಏಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಈ ಘಟನೆ, ಟಾಟಾ ಏಸ್ ನಲ್ಲಿ ಮಹಿಳೆಯರು ಗಾರ್ಮೆಟ್ ಕೆಲಸಕ್ಕೆ ತೆರಳುತ್ತಿದ್ದರು. ವೇಗವಾಗಿ ಬಂದು ಲಾರಿ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ. ಸದ್ಯ, ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.