ಬೆಳಗಾವಿಯಲ್ಲಿ ಮಹಿಳೆ ಬಟ್ಟೆ ಹರಿದು ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ, ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ನಿನ್ನೆ ರಾತ್ರಿ ಬಂಧಿತ ಆರೋಪಿಗಳನ್ನು ಬಂಧಿಸಿ, ಪೊಲೀಸರು 2ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ರು. ಈ ವೇಳೆ ಮಂಗಳವಾರದ ವರೆಗೂ ಆರೋಪಿಗಳು ನ್ಯಾಯಾಂಗ ಬಂಧನಲ್ಲಿ ಇರುವಂತೆ, ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಆರೋಪಿಗಳಾದ ಮಣಿಕಂಠ ಅಷ್ಟೇಕರ (20), ಇಂದಿರಾ ಅಷ್ಟೇಕರ (48) ಹೂವಪ್ಪ ಅಷ್ಟೇಕರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.