ಕಲಬುರಗಿ : ತಾಲೂಕಿನ ಇಟಗಾ ಗ್ರಾಮದ ಬಳಿ ಮಹಿಳೆಯನ್ನ ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆಯೊಂದು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜ್ಯೋತಿ (29) ಹತ್ಯೆಯಾದ ದುರ್ಧೈವಿ ಮಹಿಳೆಯಾಗಿದ್ಧಾಳೆ.
ಜ್ಯೋತಿ ಅವರಿಗೆ ಕಳೆದ 10 ವರ್ಷದ ಹಿಂದೆ ಮದುವೆ ಆಗಿತ್ತು. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿಯಾಗಿದ್ಧಾರೆ. ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.