ಕರ್ನಾಟಕ

ಯಾದಗಿರಿ: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ  ವೆಂಕಟರೆಡ್ಡಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ವೆಂಕಟರೆಡ್ಡಿ ಅವರು 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು. ಇವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದು, ಯಾದಗಿರಿಯ ಪುರಸಭೆಯ ಅಧ್ಯಕ್ಷರಾಗಿದ್ದರು. ಅಲ್ಲದೇ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿದ್ದರು. 
ಮೃತರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ ಯಾದಗಿರಿಗೆ ತರಲಾಗುತ್ತದೆ. ಬುಧವಾರ ಸಂಜೆ ಯಾದಗಿರಿ ತಾಲೂಕಿನಲ್ಲಿರುವ ಸ್ವಗ್ರಾಮದ ಜಮೀನಿನಲ್ಲಿ ವೆಂಕಟರೆಡ್ಡಿ ಅವರ ಅಂತ್ಯಕ್ರಿಯೆ ನಡೆಯಲಿದೆ.