ಕರ್ನಾಟಕ

ವಾಮ ಮಾರ್ಗದಲ್ಲಿ ಸರ್ಕಾರ ಅಸ್ಥಿರಗೊಳಿಸಲು ವಿಪಕ್ಷಗಳಿಂದ ಯತ್ನ; ಯತೀಂದ್ರ ಸಿದ್ದರಾಮಯ್ಯ

ವಿರೋಧ ಪಕ್ಷಗಳು ವಾಮ ಮಾರ್ಗದಿಂದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರವನ್ನು  ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು, ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ವಾಮ ಮಾರ್ಗದಿಂದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. 

ವಿಪಕ್ಷಗಳು ಸಿದ್ದರಾಮಯ್ಯ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿವೆ. ನಾವು ತನಿಖೆ ಎದುರಿಸಲು ಸಿದ್ಧ. ಆದರೆ ತನಿಖೆಗಳು ನಿಷ್ಪಕ್ಷಪಾತವಾಗಿ ಆಗುತ್ತಿಲ್ಲ. ಇಡಿ, ಐಟಿ, ಸಿಬಿಐ ರಾಜ್ಯಪಾಲರ ಕಚೇರಿ ಹಾಗೂ ಕೆಲ ಕೋರ್ಟ್ ಗಳು ಕೂಡ ಕೇಂದ್ರ ಸರಕಾರ ಹೇಳುವಂತೆ ಕೇಳುತ್ತಿವೆ. ಎಲ್ಲಾ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿವೆ. ಎಲ್ಲೂ ನ್ಯಾಯ ಸಿಗುವ ವಾತಾವರಣವೇ ಇಲ್ಲ. ಎಲ್ಲವೂ ಕೇಂದ್ರ ಸರ್ಕಾರದ ಹಿಡಿತದಲ್ಲಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.