ಮೈಸೂರು : ಇಡಿ ದಾಳಿ ವಿರುದ್ಧ ಸಿಎಂ ಸಿದ್ದರಾಮಯ್ಯ ಪರೋಕ್ಷ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪಕ್ಷ ವಿರೋಧ ಪಕ್ಷಗಳ ಮೇಲೆ ಸುಳ್ಳು ಕೇಸ್ ಹಾಕಿ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ಅಸ್ತಿರ ಮಾಡೋ ಕೆಲಸ ಮಾಡುತ್ತಿದೆ. ಇದೇ ರೀತಿ ಮುಂದುವರೆದೇ ಸರ್ವಾಧಿಕಾರಿ ದೋರಣೆ ಹೆಜ್ಜಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ವ್ಯವಸ್ಥೆ ದುರುಪಯೋಗ ಮಾಡಿಕೊಂಡು ಸರ್ಕಾರಗಳನ್ನ ಅಸ್ತಿರ ಮಾಡಿದ್ರೆ ಪ್ರಜಾಪ್ರಭುತ್ವ ಉಳಿಯೋಲ್ಲ. ಜನಪರ, ಪ್ರಾಮಾಣಿಕವಾಗಿ ಕೆಲಸ ಮಾಡೋ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಅವ್ರ ಮೇಲಿರಲಿ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.