ಕೊಡಗು: ಮೊಬೈಲ್ವಿಚಾರಕ್ಕೆ ಸಹೋದರ ಜೊತೆ ಜಗಳವಾಡಿಕೊಂಡು ಮನೆ ಬಿಟ್ಟು ತೆರಳಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಘಟನೆ ನಡೆದಿದೆ. ಕುಶಾಲನಗರದ ಆದಿಶಂಕರಾಚಾರ್ಯ ಬಡಾವಣೆ ನಿವಾಸಿ ರಣಜಿತ್ ಸಿಂಗ್ ಎಂಬುವರ ಪುತ್ರಿ ಭಾವನ ಎಂದು ಮೃತದೇಹವನ್ನ ಗುರುತಿಸಲಾಗಿದೆ.
ಬಿಡುವಿನ ವೇಳೆಯಲ್ಲಿ ರಥಬೀದಿಯಲ್ಲಿರುವ ತಂದೆಯ ಫ್ಯಾನ್ಸಿ ಸ್ಟೋರ್ನಲ್ಲಿ ತಂದೆಗೆ ನೆರವಾಗುತ್ತಿದ್ದಳು. ಡಿ.8 ರಂದು ಮೊಬೈಲ್ ವಿಚಾರವಾಗಿ ಭಾವನ ಹಾಗೂ ಆಕೆಯ ತಮ್ಮ ಮಹಿಪಾಲ್ ನಡುವೆ ಅಂಗಡಿಯಲ್ಲಿ ಜಗಳವಾಗಿದೆ. ಈ ಸಂದರ್ಭ ನಾಳೆ ಬರುವುದಾಗಿ ಹೇಳಿ ಅಂಗಡಿಯಿಂದ ಭಾವನ ಹೊರ ತೆರಳಿದ್ದಾಳೆ. ತಮ್ಮ ಮಗಳು ಕಾಣೆಯಾಗಿರುವುದಾಗಿ ತಂದೆ ರಣಜಿತ್ ಸಿಂಗ್ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ಸೋಮವಾರ ದೂರು ಸಲ್ಲಿಸಿದ್ದರು. ಸಿಸಿ ಕ್ಯಾಮೆರಾ ಪರಿಶೀಲಿಸಿದ ಸಂದರ್ಭ ಅಯ್ಯಪ್ಪಸ್ವಾಮಿ ದೇವಾಲಯ ಕಡೆ ಯುವತಿ ತೆರಳಿರುವುದು ಕಂಡುಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸಹಕಾರದೊಂದಿಗೆ ನದಿಯಲ್ಲಿ ಪರಿಶೀಲಿಸಿದಾಗ ನಾಪತ್ತೆಯಾಗಿದ್ದ ಯುವತಿ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಯ್ಯಪ್ಪಸ್ವಾಮಿ ದೇವಾಲಯದಿಂದ ಕೊಂಚ ಮುಂದಕ್ಕೆ ದಂಡಿನಪೇಟೆ ಭಾಗ ಕಾವೇರಿ ನದಿಯಲ್ಲಿ ದೊರತಿದೆ. ಇದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.