ಸ್ಪೆಷಲ್ ಸ್ಟೋರಿ

ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು

ವಿಜಯಪುರ: ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನವಭಾಗ್ ರಸ್ತೆಯ ಫಿಶ್ ಟನಲ್ ಎಕ್ಸ್ಪೋದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ನೇಹಿತರೇ ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದ್ದು ಅ.20ರಂದು ಸಾಯಂಕಾಲ ಫಿಶ್ ಟನಲ್ ಎಕ್ಸ್ಪೋದಲ್ಲಿರುವ ರೇಂಜರ್ ಸ್ವಿಂಗ್‌ನಲ್ಲಿ ನಿಖಿತಾ ಕುಳಿತಿದ್ದರು. ಮೂವರು ಯುವತಿಯರು ಒಟ್ಟಿಗೆ ಕುಳಿತಿದ್ದು, ಅದರಲ್ಲಿ ನಿಖಿತಾಳ ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ಟಾಗಿ ಕೆಳಗೆ ಬಿದ್ದಿದ್ದಾಳೆ. ತಲೆ ಕೆಳಗಾಗಿ ಬಿದ್ದ ಪರಿಣಾಮ ತ್ರೀವವಾಗಿ ಗಾಯಗೊಂಡಿದ್ದರು. ತಕ್ಷಣ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಯುವತಿ ಮೃತಪಟ್ಟಿದ್ದಾಳೆ.

ಇನ್ನೂ ಈ ಘಟನೆಯ ವಿಡಿಯೋ ಪೋಷಕರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ತಲೆ ಕೆಳಗಾಗಿ ಬಿದ್ದಿರುವುದು ತಿಳಿದು ಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಗಾಂಧಿಚೌಕ್  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ