ದೇಶ

ಅಯೋಧ್ಯೆಯಲ್ಲಿ ಯುವತಿ ಅತ್ಯಾಚಾರ, ಕೊಲೆ ಕೇಸ್‌.. ಮೂವರು ಆರೋಪಿಗಳ ಬಂಧನ

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧಾರದ ಮೇಲೆ ಇದೀಗ ಮೂವರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಅಯೋಧ್ಯೆಯ ಸಹ್ನಾವಾ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ  22 ವರ್ಷದ ಯುವತಿ ಜನವರಿ 27 ರಿಂದ ನಾಪತ್ತೆಯಾಗಿದ್ದಳು. 2 ದಿನಗಳ ನಂತರ ಅಯೋಧ್ಯೆಯ ಸಹ್ನಾವಾ ಗ್ರಾಮದ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹ ಬಟ್ಟೆ ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಣ್ಣುಗುಡ್ಡೆ ಕಿತ್ತುಹಾಕಲಾಗಿದ್ದು, ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಿರುವ ಸ್ಥಿತಿ ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧಾರದ ಮೇಲೆ ಇದೀಗ ಮೂವರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.