ದೇಶ

ಕಾಲು ಜಾರಿ ಬಿದ್ದು ಜೀವ ಕಳೆದುಕೊಂಡ ಯುವತಿಯರು

ಇಬ್ಬರು ಯುವತಿಯರು ಕಾಲು ಜಾರು ಬಿದ್ದು ಜೀವ ಕಳೆದುಕೊಂಡಿದ್ದಾರೆ

ಮಂಡ್ಯ - ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ನೀರು ಪಾಲಾದ ಘಟನೆ ಬೆಳಕಿಗೆ ಬಂದಿದೆ. ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮುತ್ತತ್ತಿಯಲ್ಲಿ ಘಟನೆ ವರದಿಯಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಇದ್ದು , ಮುತ್ತತ್ತಿಯ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ದುರ್ಘಟನೆ ಸಂಭವಿಸಿದೆ. 

ಈ ಘಟನೆಯೂ 50ಕ್ಕೂ ಹೆಚ್ಚು ಮಂದಿ ಸಂಬಂಧಿಕರ ಜೊತೆ ದೇವರ ಕಾರ್ಯಕ್ಕೆ ಬಂದಾಗ ನಡೆದಿದೆ. ಶೋಭಾ (23), ನದಿಯಾ (19) ಮೃತರು ಎಂದು ಗುರುತಿಸಲಾಗಿದೆ. ಮೃತರು ಕನಕಪುರ ತಾಲೂಕಿನ ಗಾಣಾಳು ಗ್ರಾಮದವರು ಎಂದು ತಿಳಿದು ಬಂದಿದೆ. ನದಿಯಲ್ಲಿ ಸ್ನಾನ ಮಾಡಲು ಹೋದ ವೇಳೆಯಲ್ಲಿ ಕಾಲು ಜಾರಿ ಘಟನೆ ಆಗಿದು , ಈ ವೇಳೆ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯೂ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.