ಕರ್ನಾಟಕ

ಸಾಲಗಾರರ ಕಾಟಕ್ಕೆ ನೇಣಿಗೆ ಕೊರಳೊಡ್ಡಿದ ಯುವಕ..!

ಮೂರು‌ ದಿನದ ಹಿಂದೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮುಂದಾಗಿದ್ದ ನವೀನ್‌, ದೂರು ನೀಡದೆ ಗ್ರಾಮಸ್ಥರ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ವಾಪಸ್ಸಾಗಿದ್ರು.

ಮಂಡ್ಯ : ಮೀಟರ್ ಬಡ್ಡಿದಂಧೆ, ಸಾಲಗಾರರ ಕಾಟಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ  ವಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆ ಮೆಣಸ ಗ್ರಾಮದ ಲೋಹಿತ್ @ ನವೀನ್ (35) ಖಾಸಗಿ ವ್ಯಕ್ತಿಗಳಿಂದ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದ. 30 ಲಕ್ಷದಷ್ಟು ಸಾಲ ಮಾಡಿ, ಲಕ್ಷ ಲಕ್ಷ ಬಡ್ಡಿ ಕೂಡ ಕಟ್ಟಿದ್ದ. ಮೈಕ್ರೋ ಫೈನಾನ್ಸ್ ನಲ್ಲೂ ಸಾಲ ಪಡೆದಿರೋ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಖಾಸಗಿ ಸಾಲಗಾರರ ಕಾಟಕ್ಕೆ ಬೇಸತ್ತಿದ್ದ ಲೋಹಿತ್ ನೇಣಿಗೆ ಶರಣಾಗಿದ್ದಾರೆ. 

ಮೂರು‌ ದಿನದ ಹಿಂದೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮುಂದಾಗಿದ್ದ ನವೀನ್‌, ದೂರು ನೀಡದೆ ಗ್ರಾಮಸ್ಥರ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ವಾಪಸ್ಸಾಗಿದ್ರು. ಇದೀಗ ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿದಾರರ ಕಾಟಕ್ಕೆ ಬೇಸತ್ತುಮನೆಯಲ್ಲೇ  ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.