ವೈರಲ್

ನದಿಗೆ ಈಜಲು ಹೋದ ಯುವಕ ನೀರು ಪಾಲು, ಇನ್ನು ಪತ್ತೆಯಾಗದ ಮೃತದೇಹ..!

ಮಂಡ್ಯ ಜಿಲ್ಲೆಯ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ್ದಾನೆ.

ಮಂಡ್ಯ: ಮಂಡ್ಯ ಜಿಲ್ಲೆಯ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಚಂದಾಪುರ ನಿವಾಸಿ ಕೌಶಿಕ್(22) ನೀರುಪಾಲದ ಯುವಕ. ಮೃತ ಕೌಶಿಕ್ ಚಂದಾಪುರದ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು.

ಘಟನೆಯ ವಿವರ:
ಕೌಶಿಕ್ ಸ್ನೇಹಿತರ ಜೊತೆ ಮುತ್ತತ್ತಿಗೆ ಬಂದಿದ್ದರು, ಈ ವೇಳೆ ಕಾವೇರಿ ನದಿಯಲ್ಲಿ ಈಜು ಹೊಡೆಯಲು ಹೋಗಿ ದುರ್ಘಟನೆ ಸಂಭವಿಸಿದೆ. ಆದರೆ ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ, ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಈ  ಘಟನೆಯ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.